Home ರಾಜಕೀಯ ಸಮಾಚಾರ ಧರ್ಮಸ್ಥಳ;  ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

ಧರ್ಮಸ್ಥಳ;  ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

0

ಧರ್ಮಸ್ಥಳ : ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ ನವೆಂಬರ್ 01 ರಂದು ನೆರವೇರಿತು. ಧರ್ಮಸ್ಥಳ ಬಿಜೆಪಿ ಹಿರಿಯ ಕಾರ್ಯಕರ್ತರಾಗಿರುವ ರಾಜೇಂದ್ರ ಅಜ್ರಿಯವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.
ಬೆಳ್ತಂಗಡಿ ಬಿಜೆಪಿ ಮಂಡಲಾಧ್ಯಕ್ಷರಾದ ಶ್ರೀನಿವಾಸ್ ರಾವ್  ಮಾತನಾಡಿ ಮಾಹಿತಿ ನೀಡಿದರು.
ನಮ್ಮ ವೈಚಾರಿಕತೆ ಮತ್ತು ಪಂಚ ಪರಿವರ್ತನೆ ವಿಷಯವನ್ನು ನಂದಕುಮಾರ್,ಬೂತ್ ಸಂಘಟನೆ ಮತ್ತು ಸ್ಥಳೀಯ ಆಡಳಿತದೊಂದಿಗೆ ನಮ್ಮ ಪಾತ್ರ ಈ ವಿಷಯವನ್ನು ಸೀತಾರಾಮ್ ಬೆಳಾಲು, ವಿಕಸಿತ ಭಾರತದ ಅಮೃತ ಕಾಲದಲ್ಲಿ ನಮ್ಮ ಸಕ್ರಿಯತೆ ವಿಷಯವನ್ನು ವೃಷಾಂಕ್ ಖಾಡಿಲ್ಕರ್ ಅರಸಿನಮಕ್ಕಿ ಬೈಠಕ್ ನೀಡಿದರು.
ಸಮಾರೋಪ ಸಮಾರಂಭದಲ್ಲಿ ಶಾಸಕ ಹರೀಶ್ ಪೂಂಜ ಸಮಾರೋಪ ಭಾಷಣ ಮಾಡಿ ಪಕ್ಷ ಸಂಘಟನೆಯ ಬಗ್ಗೆ ಹಾಗೂ ಇತರ ವಿಚಾರಗಳ ಬಗ್ಗೆ ತಿಳಿಸಿದರು.

ಸಿ ಎ ಬ್ಯಾಂಕ್ ಅಧ್ಯಕ್ಷರಾದ ಪ್ರೀತಮ್ ಡಿ. ಅವರು ಸ್ವಾಗತಿಸಿದರು.
ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ ಬೂತ್ ವರದಿ ಪಡೆದುಕೊಂಡರು. ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಉಪಸ್ಥಿತರಿದ್ದರು.ಶಕ್ತಿಕೇಂದ್ರ ಪ್ರಮುಖ್ ವಿಕ್ರಮ್ ಗೌಡ ಧನ್ಯವಾದ ಸಮರ್ಪಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version