ಬೆಳ್ತಂಗಡಿ : ಕಳೆದ 50 ದಿನಗಳಿಂದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ಹೋರಾಟ ನಡೆಸುತ್ತಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ಲಭಿಸಿದ್ದು ಈ ಹಿನ್ನಲೆಯಲ್ಲಿ ಕೆಲವು ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಸೋಮವಾರ ಹಾಜರಾಗಿದ್ದಾರೆ.
ಹಳೆಯ ಪ್ರಕರಣಗಳಿಗೆ ಸಂಭಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ವಾರಂಟ್ ಜಾರಿಯಾಗಿತ್ತು ಎನ್ನಲಾಗಿದೆ. ಬೆಳ್ತಂಗಡಿ ನ್ಯಾಯಾಲಯಕ್ಕೆ ನ.3 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.









