ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮಚ್ಚಿನ, , ಶಾಲೆಯನ್ನು ಕೆಪಿಎಸ್ ( ಕರ್ನಾಟಕ ಪಬ್ಲಿಕ್ ಸ್ಕೂಲ್ )ಶಾಲೆಯಾಗಿ ಸರ್ಕಾರ ಮೇಲ್ದರ್ಜೆಗೇರಿಸಿ ಆದೇಶಿಸಿದ್ದು.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರಿಗೆ ಶಾಲಾ ಅಭಿವೃದ್ಧಿ ಸಮಿತಿಯವರ ಮನವಿಯ ಮೇರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಮನವಿಯನ್ನು ಸಲ್ಲಿಸಿದ್ದು ಈ ಮನವಿಗೆ . ಸಚಿವರು ಪೂರಕವಾಗಿ ಸ್ಪಂದಿಸಿ ಶಾಲೆಯನ್ನು ಕೆಪಿಎಸ್ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆರಿಸಿ ಆದೇಶವನ್ನು ಮಾಡಿದ್ದು. ಶಾಲಾ ಅಭಿವೃದ್ಧಿಯ ಮನವಿಗೆ ಸ್ಪಂದಿಸಿ ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರಿಗೆ ಸಮಿತಿಯವರು ಇಂದು ಕಚೇರಿಯಲ್ಲಿ ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹರೀಶ್ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ಮಚ್ಚಿನ, ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಕೋರಬೆಟ್ಟು, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಘಟಕದ ಪ್ರಧಾನ ಕಾರ್ಯದರ್ಶಿ ನಾರಾಯಣ ಪೂಜಾರಿ ಮಚ್ಚಿನ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಹರೀಶ್ ಕುದ್ಕೊಳಿ, ಅಶ್ರಫ್ ಕಾರಂದೂರು, ಕಿರಣ್ ಭಟ್, ರೊನಾಲ್ಡ್ ಕುದ್ಕೊಳಿ, ಸುಧೀರ್ ಬರೆದಾಡಿ, ಸಂಪತ್ ಪೂಜಾರಿ ಕೈಲಾ, ಶ್ರೀಮತಿ ವಿದ್ಯಾ ಕುತ್ತಿನ, ಶ್ರೀಮತಿ ಸವಿತಾ, ಕೇಶವ ಪೂಜಾರಿ, ಉಪಸ್ಥಿತರಿದ್ದರು.









