ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ. ಅಬ್ದುಲ್ ಬಶೀರ್ ರವರು ಅ6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯಲ್ಲಿ ಪತ್ತೆಯಾಗಿದೆ.
ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಇವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ.
