Home ಅಪರಾಧ ಲೋಕ ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆಯ ದ್ವಿಸಹಸ್ರ ಮದ್ಯವರ್ಜನ ಶಿಬಿರ ಸಹಸ್ರಾರು ಮದ್ಯವರ್ಜಿತರ ಸಮಾವೇಶ

ಧರ್ಮಸ್ಥಳದಲ್ಲಿ ಜನಜಾಗೃತಿ ವೇದಿಕೆಯ ದ್ವಿಸಹಸ್ರ ಮದ್ಯವರ್ಜನ ಶಿಬಿರ ಸಹಸ್ರಾರು ಮದ್ಯವರ್ಜಿತರ ಸಮಾವೇಶ

27
0

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ವತಿಯಿಂದ ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಹುಕಗಕ್ಕೇರಿಯ ಗುರು ಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾ ಸ್ವಾಮಿಗಳು ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಕ ರಾಜ್ಯ ಮದ್ಯಪಾನ ಸಂಯಮ‌ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲದಾಪುರ ಅವರು ನೆರವೇರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಹೇಮಾವತಿ ವಿ ಹೆಗ್ಗಡೆ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್, ಮಾಣಿಲದ ಮೋಹನದಾಸ ಸ್ವಾಮೀಜಿ, ಯೋಜನೆಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್, ಜನಜಾಗೃತಿ ವೇದಿಕೆಯ ಟ್ರಸ್ಟಿ ಶ್ರದ್ದಾ ಅಮಿತ್,  ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ ಬಾದಾಮಿ, ಹಾಗೂ ಜನಜಾಗೃತಿ ವೇದಿಕೆಯ ಟ್ರಸ್ಟಿಗಳು,ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.
ಜಾಥಾದ ಉದ್ಘಾಟನೆಯನ್ನು ಮೆಸ್ಕಾಂ ಅಧ್ಯಕ್ಷರಾದ ಹರೀಶ್ ಕುಮಾರ್ ನೆರವೇರಿಸಿದರು.
ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ ಪಯಸ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ವೇದಿಕೆಯ ಸ್ಥಾಪಕಾಧ್ಯಕ್ಷ ವಸಂತ ಸಾಲಿಯಾನ್, ಆರ್.ಬಿ ಹೆಬ್ಬಳ್ಳಿ ಅವರನ್ನು ಸನ್ಮಾನಿಸಲಾಯಿತು.
ಎರಡು ಸಾವಿರನೇ ಶಿಬಿರದ ಪ್ರಯುಕ್ತ ರಾಜ್ಯದಲ್ಲಿ ವಿವಿದೆಡೆ 13 ಶಿಬಿರಗಳನ್ನು ನಡೆಸಲಾಗಿದ್ದು ಈ ಶಿಬಿರಗಳಲ್ಲಿ 888 ಮಂದಿ ಭಾಗವಹಿಸಿ ಮದ್ಯಮುಕ್ತರಾಗಿದ್ದಾರೆ.
ಈ ಸಂದರ್ಭದಲ್ಲಿ 14ಮಂದಿಗೆ ಜಾಗೃತಿ ಅಣ್ಣ, ಮಿತ್ರ ಪ್ರಶಸ್ತಿಯನ್ನು ನೀಡಲಾಯಿತು.

LEAVE A REPLY

Please enter your comment!
Please enter your name here