ಬೆಳ್ತಂಗಡಿ: ವೃದ್ಧನ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಹೊಸಂಗಡಿ ಗ್ರಾಮದ ಬಿದಿರುಕಾಡು ಎಂಬಲ್ಲಿ ಸಂಭವಿಸಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಕಲಿಸಲಾಗಿದೆ.
ಸ್ಥಳೀಯ ನಿವಾಸಿ ಮಾಧವ (71) ಎಂಬವರೇ ಮೃತ ವ್ಯಕ್ತಿಯಾಗಿದ್ದಾರೆ.
ಅ.ನಾರೋಗ್ಯದಿಂದ ಬಳಲುತ್ತಿದ್ದ ಇವರು ನ 4ರಂದು ರಾತ್ರಿ ಊಟ ಮಾಡಿ ಮಲಗಿದವರು ಬೆಳಗ್ಗೆ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದಾಗ ಅವರ ಮೃತದೇಹ ಮನೆಯ ಮುಂದಿನ. ಬಾವಿಯ ನೀರಿನಲ್ಲಿ ಪತ್ತೆಯಾಗಿದೆ. ಇವರು ರಾತ್ರಿ ಎದ್ದು ಹೊರಗೆ ಬಂದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದರೆ ಅಥವಾ ಬಾವಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರಬಹುದು ಎಂದು ಅನುಮಾನಿಸಲಾಗಿದೆ. ಸ್ಥಳಕ್ಕೆ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಮೃತರ ಮಗಳು ನೀಡಿದ ದೂರಿನಂತೆ ಕಲಂ 194 ಬಿ.ಎನ್.ಎಸ್. ಅಡಿಯಲ್ಲಿ ಪ್ರಕರಣದಾಖಲಿಸಿಕೊಂಡಿದ್ದಾರೆ.



