Home ಸ್ಥಳೀಯ ಸಮಾಚಾರ ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ; ಬೆಳ್ತಂಗಡಿ ತಾಲೂಕಿನ ಮೂವರಿಗೆ ಗೆಲುವು

ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ; ಬೆಳ್ತಂಗಡಿ ತಾಲೂಕಿನ ಮೂವರಿಗೆ ಗೆಲುವು

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನ ಮೂವರು ವಿಜೇತರಾಗಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ
ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ಟಿ.ವಿ 9 ಕನ್ನಡ ಸುದ್ದಿವಾಹಿನಿಯ ರಾಜೇಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಬೆಳ್ತಂಗಡಿಯ ಹಿರಿಯ ಪತ್ರಕರ್ತರ ಭುವನೇಶ್ ಗೇರುಕಟ್ಟೆ ಅವರು ಚುನಾವಣೆಯಲ್ಲಿ ಗೆಲುವನ್ನು ಪಡೆದಿದ್ದಾರೆ. ಅದೇರೀತಿ ರಿಪಬ್ಲಿಕ್ ಕನ್ನಡ ಚಾನೆಲ್ ನ ದಿವಾಕರ ಪದ್ಮುಂಜ ಅವರು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚುನಾಯಿತರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version