ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು ತಮ್ಮ ವಿರುದ್ದ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೇಟ್ಟಿಲ್ಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿಗೆ ಅ.30 ರಂದು ವಿಚಾರಣೆ ವೇಳೆ ಹೈಕೋರ್ಟ್ ನಲ್ಲಿ ನ.12 ರವೆಗೆ ಎಸ್.ಐ.ಟಿ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಇದೀಗ ನ್ಯಾಯಾಲಯ ಈ ತಡೆಯಾಜ್ಞೆ ತೆರವುಗೊಳಿಸಿದ್ದು ತನಿಖೆ ಮುಂದುವರಿಸಲು ಅವಕಾಶ ನೀಡಿದೆ
ಈ ಪ್ರಕರಣ ಸಂಬಂಧ ನ. 12 ರಂದು ಹೈಕೋರ್ಟ್ ಎಸ್.ಐ.ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ತನಿಖೆ ಮುಂದುವರಿಸಲು ಸೂಚನೆ ನೀಡಿದೆ. ಪ್ರಕರಣ ರದ್ದು ಕೋರಿದ ಅರ್ಜಿಯ ವಿಚಾರಣೆಯನ್ನು ಮುಂದೂಡಿದಿದೆ.
