ಬೆಳ್ತಂಗಡಿ: ತಾಲೂಕಿನ ಇಳಂತಿಲ ಗ್ರಾಮದ ನಿವಾಸಿ 10 ನೇ ತರಗತಿ ವಿದ್ಯಾರ್ಥಿಯೋರ್ವಳು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಇಳಂತಿಲ ಗ್ರಾಮದ ಪಾರಡ್ಕ ಮನೆ ನಿವಾಸಿ ಹರ್ಷಿತಾ (15 ವರ್ಷ) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಹರ್ಷಿತಾ ನ 4 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪಾರಡ್ಕ ಎಂಬಲ್ಲಿ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡವಳನ್ನು ವಿಷಯ ತಿಳಿದು ಕೂಲಿ ಕೆಲಸಕ್ಕೆ ಹೋಗಿದ್ದ ಆಕೆಯ ತಾಯಿ ಗೀತಾಳು ಮನೆಗೆ ಬಂದು ಒಂದು ಅಟೋ ರಿಕ್ಷಾದಲ್ಲಿ ಹರ್ಷಿತಾಳನ್ನು ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಆಂಬ್ಯುಲೆನ್ಸ್ ನಲ್ಲಿ ಮಂಗಳೂರು ವೆನ್ಸಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದರು.
ಮೃತರ ತಂದೆ ಮಂಗಳೂರು ವೆನ್ಹಾಕ್ ಆಸ್ಪತ್ರೆಯಲ್ಲಿ ಹರ್ಷಿತಾ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈಕೆ ನ.12 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ .
ಈಬಗ್ಗೆ ಮೃತ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು ಹರ್ಷಿತಾಳಿಗೆ ಕಡಬದ ರಾಜೇಶ್ ಎಂಬಾತನು ಫೋನ್ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರುವುದರಿಂದ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ಇರುತ್ತದೆ. ಅವಳ ಸಾವಿನಲ್ಲಿ ಬೇರೆ ಯಾವುದೇ ಸಂಶಯ ಅಥವಾ ಕಾರಣ ತಿಳಿದಿರುವುದಿಲ್ಲ ಎಂದು ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
