Home ಅಪರಾಧ ಲೋಕ ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾ...

ವಿಶ್ವ ಹಿಂದೂ ಪರಿಷತ್ ಮುಖಂಡ ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾ ಗೊಳಿಸಿದೆ ಹೈಕೋರ್ಟ್

0

ಬೆಳ್ತಂಗಡಿ: ಹಿಂದೂ ಮುಖಂಡರ ಮನೆಗಳಿಗೆ ತಡರಾತ್ರಿ ಪೋಲಿಸರು ತೆರಳಿ ಫೋಟೋ ತೆಗೆಯುತ್ತಿದ್ದ ಘಟನೆಗೆ ಸಂಬಂಧಿಸಿ, ಜೂ.4ರಂದು ಕಡಬ ಠಾಣೆಯ ಮುಂದೆ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿ.ಹಿಂ.ಪ. ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿ ದ್ವೇಷಭಾಷಣ ಮಾಡಿದ್ದಕ್ಕೆ ಕಡಬ ಠಾಣೆಯಲ್ಲಿ ದಾಖಲಾಗಿದ್ದ ಎಫ್.ಐ.ಆರ್.ನ್ನು ಹೈಕೋರ್ಟ್ ನ.12ರಂದು ವಜಾಗೊಳಿಸಿದೆ.

ತಡರಾತ್ರಿ ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ತೆರಳಿ ಅವರ ಜತೆ ಫೋಟೋ ತೆಗೆದಿದ್ದರು. ಈ ಘಟನೆಯನ್ನು ಖಂಡಿಸಿ ಕಡಬ ಠಾಣೆಯ ಎದುರು ಜೂ.4ರಂದು ಸಂಜೆ ಪ್ರತಿಭಟನೆ ನಡೆಸಲಾಗಿದ್ದು, ನವೀನ್ ನೆರಿಯ ಅವರು ಭಾಷಣ ಮಾಡಿದ್ದರು. ಈ ಘಟನೆಯ ಬಗ್ಗೆ ದ್ವೇಷ ಭಾಷಣ ಮಾಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಮಾಡಲಾಗಿದೆ ಎಂದು ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನು ಪ್ರಶ್ನಿಸಿ ನವೀನ್ ನೆರಿಯ ಅವರು ಖ್ಯಾತ ವಕೀಲ ಅರುಣ್ ಶ್ಯಾಮ್ ಅವರ ಮೂಲಕ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆದು, ನ.12ರಂದು ಹೈಕೋರ್ಟ್ ಅವರ ವಿರುದ್ದ ದಾಖಲಾಗಿದ್ದ ಎಫ್ ಐ ಆ‌ರ್ ನ್ನು ರದ್ದುಗೊಳಿಸಿ ಆದೇಶನೀಡಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version