ಬೆಳ್ತಂಗಡಿ; ನಿಟ್ಟಡೆಯಲ್ಲಿ ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಕುಕ್ಕೇಡಿ ಗ್ರಾಮದ ನಿವಾಸಿ ಸಂಪತ್ ಕುಮಾರ್ ಎಂಬವರ ಬೈಕ್ ಕಳ್ಳತನವಾಗಿದೆ.ಇವರು ನ10 ರಂದು ರಾತ್ರಿ ಮನೆಗೆ ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಪೆಟ್ರೋಲ್ ಮುಗಿದ ಕಾರಣ ಬೈಕ್ ಅನ್ನು ನಿಟ್ಟಡೆ ಗ್ರಾಮದ ಪಾಣೂರು ಎಂಬಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಮನೆಗೆ ಹೋಗಿದ್ದು ನ 11ರಂದು ಬೆಳಗ್ಗೆ ಬಂದು ನೋಡಿದಾಗ ನಿಲ್ಲಿಸಿದ್ದ ಬೈಕ್ ಅಲ್ಲಿರಲಿಲ್ಲ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಸಿಗದ ಹಿನ್ನಲೆಯಲ್ಲಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳವಾದ ಬೈಕ್ ನ ಮೌಲ್ಯ ಅಂದಾಜು 10,000 ಎಂದು ಅಂದಾಜಿಸಲಾಗಿದೆ.
ತಾಲೂಕಿನಲ್ಲಿ ಬೈಕ್ ಕಳ್ಳತನ ನಿರಂತರವಾಗಿ ನಡೆಯುತ್ತಿದ್ದು ಇದು ಜನರಲ್ಲಿ ಆತಂಕ ಮೂಡಿಸಲು ಕಾರಣವಾಗಿದೆ. ಎರಡು ದಿನಗಳ ಹಿಂದೆ ಉಜಿರೆಯಲ್ಲಿ ಬೈಕ್ ನಿಲ್ಲಿಸಿ ತರಕಾರಿ ತೆಗೆದುಕೊಂಡು ಬರುವ ವೇಳೆಗೆ ಬೈಕ್ ಕಳ್ಳತನವಾಗಿತ್ತು. ಪೊಲೀಸರು ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
