Home ಅಪರಾಧ ಲೋಕ ಎಸ್ಐಟಿ ಅಧಿಕಾರಿಗಳ ವಿರುದ್ಧ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ದೂರು

ಎಸ್ಐಟಿ ಅಧಿಕಾರಿಗಳ ವಿರುದ್ಧ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ದೂರು

30
0


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ.
ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಇದೀಗ ದೂರು ದಾಖಲಿಸಿದ್ದಾರೆ ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟ‌ರ್ ಮಂಜುನಾಥ ಗೌಡ, ಸಬ್ ಇನ್‌ಸ್ಪೆಕ್ಟ‌ರ್ ಗುಣಪಾಲ್
ವಿರುದ್ಧ ದೂರು ನೀಡಿದ್ಧಾರೆ.

ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಲಾಗಿದೆ. ಅಲ್ಲದೆ ಕಾನೂನು ಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಪೊಲೀಸರು ಈಬಗ್ಗೆ ಕಾನೂನು ಸಲಹೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ

LEAVE A REPLY

Please enter your comment!
Please enter your name here