Home ಸ್ಥಳೀಯ ಸಮಾಚಾರ ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಶ್ರೀಕ್ಷೇತ್ರ ಧರ್ಮಸ್ಥಳ ಸಾಹಿತ್ಯ ಸಮ್ಮೇಳನ ಉದ್ಘಾಟನೆ

18
0

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ 93ನೆಯ ಅಧಿವೇಶನದ ಉದ್ಘಾಟನೆಯನ್ನು ಹಿರಿಯ ಸಾಹಿತಿಗಳಾದ ಪ್ರೊ ಪ್ರೇಮಶೇಖರ ಅವರು ಉದ್ಘಾಟಿಸಿದರು.
ಸಮ್ಮೇಳನದ ಅಧ್ಯಕ್ಷೆತೆಯನ್ನು ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್ ಅವರು ವಹಿಸಿದ್ದರು.
ಸಮ್ಮೇಳನದಲ್ಲಿ ಬೆಂಗಳೂರಿನ ಶಾಂತಾ ನಾಗಮಂಗಲ, ಡಾ.ರಘು, ಡಾ.ಬಿ.ಎಂ ಶರಭೇಂದ್ರ ಸ್ವಾಮಿ ಅವರು ಉಪನ್ಯಾಸಗಳನ್ನು ನೀಡಿದರು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಸಾಹಿತ್ಯಕ್ಕೂ ಇರುವ ಸಂಬಂಧಗಳನ್ನುವಿವರಿಸಿದರು ವೇದಿಕೆಯಲ್ಲಿ ಡಿ ಹರ್ಷೇಂದ್ರ ಕುಮಾರ್, ಡಿ ಸುರೇಂದ್ರ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.
ಡಾ.ಶ್ರೀಧರ ಭಟ್ ಹಾಗೂ ಡಾ.ದಿವಾ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here