ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಗುತ್ತಿಮಾರು ಬಾಬು ಗೌಡ (56) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ19 ರಂದು ನಡೆದಿದೆ.
ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಬುಧವಾರ ಸಂಜೆಯ ವೇಳೆಗೆ ಪತ್ತೆಯಾಗಿದೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಪತ್ನಿ ಮಕ್ಕಳನ್ನು ಅಗಲಿದ್ದಾರೆ.









