ಬೆಳ್ತಂಗಡಿ; ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಶನಿವಾರ ಧರ್ಮಸ್ಥಳದಲ್ಲಿ ನಡೆಯಿತು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರಹೆಗ್ಗಡೆಯವರು ಶಿಲಾನ್ಯಾಸ ನೆರವೇರಿಸಿದರು. ಸಂಸದ ಬ್ರಿಜೇಶ್ ಚೌಟ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತು ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ ವಿವಿಧ ಗ್ರಾ.ಪಂ ಅಧ್ಯಕ್ಷರುಗಳು ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು
ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು.
614ಕೋಟಿಯ ಕಾಮಗಾರಿ
ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಗೆ ರಾಷ್ಟ್ರೀಯ ಹೆದ್ದಾರಿಗಳ ಇಲಖೆಯ ಹೆದ್ದಾರಿ ನಿರ್ವಹಣೆ ಯೋಜನೆಯ ಅಡಿಯಲ್ಲಿ 614 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಆರಂಭವಾಗಲಿದೆ.










