Home ಸ್ಥಳೀಯ ಸಮಾಚಾರ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದ ಸುಲ್ಕೇರಿಯ ಶಶಿಕಾಂತ್

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದ ಸುಲ್ಕೇರಿಯ ಶಶಿಕಾಂತ್

0

ಬೆಳ್ತಂಗಡಿ;  ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.  ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇಲ್ಲಿ 10 ನೇ ತರಗತಿ ವಿಧ್ಯಾರ್ಥಿ. ಸುಲ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪ ರವರ ಪುತ್ರ. ರಾಷ್ಟ್ರದ ಮಟ್ಟದ ಕಬಡ್ಡಿ ಪಂದ್ಯಾಟವು ಹರಿಯಾಣ ರಾಜ್ಯದಲ್ಲಿ ನಡೆಯಲಿದ್ದು , ಸೋಮವಾರ ಹರಿಯಾಣಕ್ಕೆ ತೆರಳಲಿದ್ದಾರೆ. ನವೆಂಬರ್ 27 ರಿಂದ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version