Home ರಾಷ್ಟ್ರ/ರಾಜ್ಯ ಪ್ರಧಾನಿ, ರಾಷ್ಟ್ರ ಪತಿ‌ಸೇರಿದಂತೆ ಗಣ್ಯರಿಂದ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ  ಜನ್ಮದಿನಕ್ಕೆ ಶುಭ ಹಾರೈಕೆ

ಪ್ರಧಾನಿ, ರಾಷ್ಟ್ರ ಪತಿ‌ಸೇರಿದಂತೆ ಗಣ್ಯರಿಂದ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ  ಜನ್ಮದಿನಕ್ಕೆ ಶುಭ ಹಾರೈಕೆ

0


ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಂಗಳವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 78 ನೆ ಜನ್ಮದಿನವನ್ನು ಸರಳವಾಗಿ ಸಂಭ್ರಮ-ಸಡಗರದಿಂದ ಆಚರಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರು ಹಾಗೂ
ರಾಷ್ಟ್ರ ಪತಿ ದ್ರೌಪದಿ ಮುರ್ಮು, ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವರು ಗಣ್ಯರು ಪತ್ರದ ಮೂಲಕ ಡಾ. ಹೆಗ್ಗಡೆಯವರಿಗೆ ಶುಭಾಶಯ ಕೋರಿದರು.

ಮೂಡಬಿದ್ರೆಯ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ವಿಶೇಷ ಪೂಜೆಯ ಪ್ರಸಾದ ನೀಡಿ ಆಶೀರ್ವದಿಸಿದರು.
ಮಾಣಿಲದ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಪೆರಿಂಜೆ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಜೀವಂಧರ ಜೈನ್ ಮತ್ತು ಪುತ್ರರು, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ ಮೊದಲಾದವರು ಹೆಗ್ಗಡೆಯವರಿಗೆ ಜನ್ಮದಿನದ ಶುಭ ಹಾರೈಕೆಗಳನ್ನು ಅರ್ಪಿಸಿದರು.

ದೇವಳ ನೌಕರರು, ಊರಿನ ನಾಗರಿಕರು, ವಿವಿಧ ಸಂಘ-ಸಂಸ್ಥೆಗಳವರು ಪೂಜ್ಯ ಹೆಗ್ಗಡೆಯವರಿಗೆ ಫಲಪುಷ್ಪ ಹಾರ ಅರ್ಪಿಸಿ ಶ್ರದ್ಧಾಭಕ್ತಿಯಿಂದ ಶುಭ ಹಾರೈಕೆಗಳನ್ನು ಅರ್ಪಿಸಿದರು.

ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು ಮಠದಲ್ಲಿಯೆ ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭ ಹಾರೈಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version