
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣದಲ್ಲಿ ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆ ಮುಂದುವರಿಯಲಿ, ಅರ್ಜಿದಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
ನ28 ರಂದು ಎಸ್.ಐ.ಟಿ ತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗರೀಶ್ ಮಟ್ಟಣ್ಣನವರ್, ಜಯಂತ್ ಟಿ, ವುಠಲ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ಮುಂದುವರಿದ ವಿಚಾರಣೆ ನಡೆಸಿದ ಹೈಕೋರ್ಟ್ ದೂರುದಾರರ ಪರವಾದ ವಾದಗಳನ್ನು ಆಲಿಸಿದ ಬಳಿಕ ಎಸ್.ಐ.ಟಿ ತನಿಖೆ ಮುಂದುವರಿಯಲಿ ಎಂದು ನ್ಯಾಯಾಲಯ ಸೂಚಿಸಿದೆ. ಈ ಹಿಂದೆ ನೀಡಿದ್ದ ಆದೇಶದಂತೆ ಅರ್ಜಿದಾರರಿಗೆ ಎಸ್.ಐ.ಟಿ ಯಾವುದೇ ಕಿರುಕುಳ ನೀಡಬಾರದು ಎಂದು ಸೂಚಿಸಿದೆ.
ಇದೀಗ ಎಸ್.ಐ.ಟಿ ತನಿಖೆಗೆ ಯಾವುದೇ ಅಡೆತಡೆಗಳು ಇಲ್ಲವಾಗಿದ್ದು ತನಿಖೆ ಮುಂದುವರಿಯಲಿದೆ.
ಈಗಾಗಲೆ ಎಸ್.ಐ.ಟಿ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿಯೊಂದನ್ನು ಸಲ್ಲಿಸಿದ್ದು ನ್ಯಾಯಾಲಯದಲ್ಲಿ ತನಿಖೆಯೊಂದಿಗೆ ಮಹೇಶ್ ಶೆಟ್ಟಿ ಹಾಗೂ ಇತರರು ಸಹಕರಿಸುತ್ತಿಲ್ಲ ಎಂಬ ವಿಚಾರವನ್ನು ನ್ಯಾಯಾಧೀಶರ ಮುಂದೆ ಇಟ್ಟಿರುವುದಾಗಿ ತಿಳಿದು ಬಂದಿದ್ದು ನ್ಯಾಯಾಲಯದಿಂದ ಸೂಕ್ತ ಅನುಮತಿಗಳನ್ನು ಪಡೆದುಕೊಂಡು ಮುಂದಿನ ತನಿಖೆಗೆ ಸಿದ್ದತೆ ನಡೆಸುತ್ತಿದೆ.