
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಂದ್ರಪ್ರದೇಶ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಜು.26 ರಿಂದ ನ.18 ರ ಸಮಯದಲ್ಲಿ ಬಲತ್ಕಾರದಿಂದ ಹಲವು ಭಾರಿ ಅತ್ಯಾಚಾರ ಮಾಡಿ ಎರಡು ತಿಂಗಳ ಗರ್ಭಿಣಿ ಮಾಡಿದ ಪ್ರಕರಣ ಸಂಬಂಧ ಅಪ್ರಾಪ್ತ ಬಾಲಕಿಯ ಸಂಬಂಧಿ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ವೇಣೂರು ಪೊಲೀಸ್ ಠಾಣೆಯಲ್ಲಿ ನ.25 ರಂದು ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ಅಮ್ಜತ್ ಖಾನ್(18) ವಿರುದ್ಧ ಕಲಂ 64 , BNS -2023 ಮತ್ತು 4,6 ಪೋಕ್ಸೋ ಕಾಯ್ದೆ 2012 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಮತ್ತು ಸಬ್ ಇನ್ಸ್‌ಪೆಕ್ಟರ್ ಓಮನ ತಂಡ ಆರೋಪಿ ಅಮ್ಜತ್ ಖಾನ್ (18) ಎಂಬಾತನನ್ನು ನ.27 ರಂದು ಸಂಜೆ ವೇಣೂರು ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಆರೋಪಿಯನ್ನು ನ.28 ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.