
ಬೆಳ್ತಂಗಡಿ : ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಬೈಕ್ ಸವಾರ ಪಾರ್ಪಿಕಲ್ಲು ಎಂಬಲ್ಲಿ ಧರ್ಮಸ್ಥಳ ಕಡೆ ಬರುತ್ತಿದ್ದ ಸರಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನ.30 ರಂದು ಬೆಳಗ್ಗೆ ನಡೆದಿದೆ.
ಬೈಕ್ ಸವಾರ ಮೂಲತಃ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡಗಣಹಳ್ಳಿ ನಿವಾಸಿ ಪನ್ನಕೇಶವ ಗೌಡ ಎಂಬವರ ಪುತ್ರ ದೀಪಕ್(24) ಎಂದು ತಿಳಿದು ಬಂದಿದೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.




