
ಬೆಳ್ತಂಗಡಿ: ಗುರುವಾಯನಕೆರೆ- ನಾರಾವಿ ರಸ್ತೆಯ ಕುತ್ಲೂರು ಶಾಲಾ ಬಳಿ ಬೈಕೊಂದು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕುತ್ಲೂರು ನಿವಾಸಿ ಚಿತ್ರಾಂಗದನ್(57) ಮೃತಪಟ್ಟವರು. ನ. 24ರಂದು ಬೆಳಗ್ಗೆ 7.30ಕ್ಕೆ ಕುತ್ಲೂರು ಶಾಲಾ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಯೋಗೀಶ್ ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಚಿತ್ರಾಂಗದನ್ ಅವರನ್ನು ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಕೊಡಿಸಿ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ನ.30 ರಂದು ಮೃತಪಟ್ಟಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









