
ಬೆಳ್ತಂಗಡಿ; 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಉಂಟಾಗಿರುವ ಹಾನಿಗಳಿಗೆ ಸಂಬಂಧಿಸಿದಂತೆ ತಡೆಗೋಡೆ, ರಸ್ತೆ, ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರಕಾರ ರೂ.10.67 ಕೋಟಿ ಅನುದಾನವನ್ನು ಮಂಜೂರುಗೊಳಿಸಿದೆ.