
ಬೆಳ್ತಂಗಡಿ; ಪುತ್ತೂರು ತಾಲೂಕು ಕಬಕ ಗ್ರಾಮದ ಮುರ ಎಂಬಲ್ಲಿರುವ ರೈಲ್ವೇ ಬ್ರಿಡ್ಜ್ ಬಳಿ, ವ್ಯಕ್ತಿಯೋರ್ವ ಮಾದಕವಸ್ತುವನ್ನಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂಬಾತನಾಗಿದ್ದಾನೆ.
ಮಾದಕ ವಸ್ತುಗಳ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಡಿ 3 ರಂದು ಆಂಜನೇಯ ರೆಡ್ಡಿ, ಪೊಲೀಸ್ ಉಪನಿರೀಕ್ಷಕರು (ಕಾ.ಸು), ಪುತ್ತೂರು ನಗರ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಆರೋಪಿತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಿಸಿದಾಗಆತನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂಬುದಾಗಿದ್ದು ಆತನನ್ನು ಹಾಗೂ ಆತನೊಂದಿಗಿದ್ದ ದ್ವಿಚಕ್ರ ವಾಹನ ತಪಾಸಣೆ ನಡೆಸಲಾಗಿ, ಆರೋಪಿಯು ಮಾರಾಟ ಮಾಡಲು ಅಕ್ರಮವಾಗಿ ಇಟ್ಟುಕೊಂಡಿದ್ದ 10 ಗ್ರಾಂ MDMA ಎಂಬ ನಿಷೇಧಿತ ಮಾದಕವಸ್ತು ಪತ್ತೆಯಾಗಿರುತ್ತದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು ಆತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ: 119/2025, ಕಲಂ: 8(C),22(b) NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಸದ್ರಿ ಆರೋಪಿಯ ಪ್ರಾಥಮಿಕ ವಿಚಾರಣೆ ವೇಳೆ, ಈತನ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.








