Home ರಾಷ್ಟ್ರ/ರಾಜ್ಯ ಮುಂದಿನ ಅಧಿವೇಶನದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಮಂಡನೆ; ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಂದಿನ ಅಧಿವೇಶನದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಮಂಡನೆ; ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೆಂಗಳೂರು; ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ಆ ಮೂಲಕ‌ ಅಮಾಯಕ‌ ಜನರ ಜೀವಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕೆಂಬ ಉದ್ದೇಶದೊಂದಿಗೆ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ಮುಂದಿನ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಲಾತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದು ಕಾಯ್ದೆಯಾಗಿ ಜಾರಿಗೆ ಬಂದ ನಂತರದಿಂದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಕೃತ್ಯ ಎಸಗುವ ವ್ಯಕ್ತಿ ಅಥವಾ ಸಂಘಟನೆಗಳಿಗೆ ಶಿಕ್ಷೆ ವಿಧಿಸಲು ಕಾನೂನಾತ್ಮಕ ಅವಕಾಶ ಲಭ್ಯವಾಗಲಿದೆ.

ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸಬೇಕು ಎನ್ನುವ ಸಂಕಲ್ಪ ನಮ್ಮ ಸರ್ಕಾರದ್ದಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version