
ಬೆಳ್ತಂಗಡಿ; ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟೀಸ್ ನೀಡಲಾಗಿರುವುದಾಗಿ ತಿಳಿದು ಬಂದಿದೆ.
ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು. ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಅದರಂತೆ
ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ವಸಹಾಯಕ ಕಮಿಷನರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ.
ಲಭ್ಯ ಮಾಹಿತಿಯಂತೆ
ಮಹೇಶ್ ಶೆಟ್ಟಿ ಅವರಿಗೆ
ಡಿ.8 ರಂದು ಪುತ್ತೂರು ಎಸಿ ಮುಂದೆ ಹಾಜರಾಗಲು ನೋಟಿಸ್ ಜಾರಿ ಮಾಡಿದೆ.
ಈಗ ನೀಡಿರುವ ನೋಟೀಸ್ ನಲ್ಲಿ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿರುವುದಾಗಿ ಮಾಹಿತಿ ಲಭ್ಯಾವಗುತ್ತಿದೆ.
ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿವಾದ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.