
ಬೆಂಗಳೂರು; ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
ಅಧಿವೇಶನ ವೀಕ್ಷಣೆಗೆ ಬಂದಿದ್ದ ಧನಲಕ್ಷ್ಮಿ ಪೂಜಾರಿ ಮತ್ತು ಅವರ ತರಬೇತುದಾರರನ್ನು ವಿಶೇಷವಾಗಿ ಸ್ವಾಗತಿಸಿ, ಅವರ ಸಾಧನೆಯನ್ನು ಗೌರವಿಸಲಾಯಿತು.
ಈಗಾಗಲೇ ರಾಜ್ಯ ಸರ್ಕಾರ ಧನಲಕ್ಷ್ಮಿ ಅವರಿಗೆ ಐದು ಲಕ್ಷ ನಗದು ಪ್ರೋತ್ಸಾಹಧನ ನೀಡಿದೆ.









