
ಬೆಳ್ತಂಗಡಿ; ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಅವರು ಡಿ 9 ಮಂಗಳವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯವಾದಿಗಳೊಂದಿಗೆ ಮಾತುಕತೆ ನಡೆಸಿದರು.
ರಾಜ್ಯ ವಕೀಲರ ಸಂಘದ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಣದಲ್ಲಿರುವ ಬಾಲನ್ ಅವರು ವಕೀಲರುಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಲೋಬೋ ಹಾಗೂ ಇತರ ನ್ಯಾಯವಾದಿಗಳು ಉಪಸ್ಥಿತರಿದ್ದರು.









