Home ಅಪರಾಧ ಲೋಕ ಅಕ್ರಮ ದನ ಸಾಗಾಟ ಪತ್ತೆ ಹಚ್ಚಿದ ಪೂಂಜಾಲಕಟ್ಟೆ ಪೊಲೀಸರು ಆರೋಪಿ  ಮನೆ ಜಪ್ತಿ

ಅಕ್ರಮ ದನ ಸಾಗಾಟ ಪತ್ತೆ ಹಚ್ಚಿದ ಪೂಂಜಾಲಕಟ್ಟೆ ಪೊಲೀಸರು ಆರೋಪಿ  ಮನೆ ಜಪ್ತಿ

55
0

ಬೆಳ್ತಂಗಡಿ : ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು -ತೆಕ್ಕಾರು ರಸ್ತೆಯಲ್ಲಿ ಗೂಡ್ಸ್‌ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ ಅಕ್ರಮ ದನ ಸಾಗಾಟದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆ ಹಚ್ಚಿದ್ದಾರೆ.

ಜಾನುವಾರು ಸಾಗಿಸುತ್ತಿದ್ದ ವಾಹನ ಚಾಲಕ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ(56) ಎಂಬುದಾಗಿ ತಿಳಿದುಬಂದಿದ್ದು. ಈ ಜಾನುವಾರನ್ನು ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿರುವುದು ಕಂಡುಬಂದಿರುತ್ತದೆ.
ಪತ್ತೆ ಹಚ್ಚಿದ ಒಂದು ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್ ನನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಕಲಂ: 5, 7, 12 ಕರ್ನಾಟಕ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮುಂದುವರಿದಂತೆ ತನಿಖೆ ಭಾಗವಾಗಿ ಜಾನುವಾರು ನೀಡಿದ ಆರೋಪಿ ಬಂಟ್ವಾಳ ಗ್ರಾಮದ ಸರಪ್ಪಾಡಿ ನಿವಾಸಿ ಭೋಜ ಮೂಲ್ಯರವರ ಮನೆ ಹಾಗೂ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಪುಂಜಾಲಕಟ್ಟೆ ಪೊಲೀಸರು ಡಿ.14 ರಂದು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here