
ಉಜಿರೆ: ಇಲ್ಲಿಯ ಮಾಚಾರು ಮಸೀದಿ ಸೇತುವೆಯ ಹತ್ತಿರ ಕಾರು ಮತ್ತು ಬೈಕ್ ಅಪಘಾತ ಸಂಭವಿಸಿದ ಘಟನೆ ಡಿ.15ರಂದು ಬೆಳಿಗ್ಗೆ ನಡೆದಿದೆ.
ಮಾಚಾರಿನಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್, ಹಾಗೂ ಕಾರು ಉಜಿರೆಯಿಂದ ಬೆಳಾಲು ಕಡೆಗೆ ಹೋಗುವ ಸಂದರ್ಭದಲ್ಲಿ ಚಾಲಕರ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಬೈಕ್ ಸವಾರನಿಗೆ ಗಾಯಗಳಾಗಿದ್ದುಸ್ಥಳೀಯರ ಸಹಕಾರದೊಂದಿಗೆ ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.