
ಬೆಳ್ತಂಗಡಿ : ಸೌಜನ್ಯ ಪರ ಹೋರಾಟದ ನೇತೃತ್ವ ವಹಿಸಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಗಡಿಪಾರು ಮಾಡಿ ಎರಡನೇ ಭಾರಿಗೆ ಪುತ್ತೂರು ಎ.ಸಿ ಆದೇಶ ಹೊರಡಿಸಿದ್ದಾರೆ.
ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು ಇದೀಗ ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18 ರಂದು ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ ಆದರೆ ತಿಮರೋಡಿಗೆ ಮೊದಲೇ ಈ ಬಗ್ಗೆ ಮಾಹಿತಿ ತಿಳಿದು ಅವರು ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.








