Home ರಾಜಕೀಯ ಸಮಾಚಾರ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಬೆಳ್ತಂಗಡಿ ಶಾಸಕ ಹರೀಶ್...

ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

0


ಬೆಳ್ತಂಗಡಿ; ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು
ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು ಸರಿಪಡಿಸಿ ವೇತನವನ್ನು ಪರಿಷ್ಕರಿಸಿ ಅತಿಥಿ ಉಪನ್ಯಾಸಕರಿಗೂ ಒಂದು ಉತ್ತಮ ವೇತನವನ್ನು ನಿಗದಿಪಡಿಸುವಂತೆ ಮಾನ್ಯ ಶಿಕ್ಷಣ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಲಾಯಿತು.
ಶಿಕ್ಷಕರನ್ನು ಪಠ್ಯೇತರ ಚಟುವಟಿಕೆಗಳಾದ ಬಿ ಎಲ್ ಓ ಅಥವಾ ಇನ್ನಿತರ ಚಟುವಟಿಕೆಗಳಲ್ಲಿ ಕಡಿಮೆ ತೊಡಗಿಸಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಯಿತು.
ಮಕ್ಕಳಲ್ಲಿರುವ ಮೊಬೈಲ್ ಬಳಕೆ ಹವ್ಯಾಸವನ್ನು ಕಡಿಮೆಗೊಳಿಸುವ ಉದ್ದೇಶದಿಂದ ಮಕ್ಕಳಿಗೆ ಮೊಬೈಲ್ ಮೂಲಕ ಪಠ್ಯವನ್ನು ಬೋಧಿಸುವ ಯೋಜನೆಯನ್ನು ಕೈಬಿಡುವಂತೆಯೂ ಮಾನ್ಯ ಶಿಕ್ಷಣ ಸಚಿವರಲ್ಲಿ ವಿನಂತಿಸಲಾಯಿತು
ನಲಿಕಲಿ ಶಿಕ್ಷಣ ವ್ಯವಸ್ಥೆಯಿಂದ ಗುಣಮಟ್ಟದ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದ್ದು ಈ ಬಗ್ಗೆ ಸರ್ಕಾರ ಗಮನಹರಿಸಿ ನಲಿಕಲಿ ಯೋಜನೆಯನ್ನು ಕೈಬಿಡುವಂತೆಯೂ ಮಾನ್ಯ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ಒತ್ತಾಯಿಸಿದರು.
ಬಹಳ ಮುಖ್ಯವಾಗಿ ಸರ್ಕಾರ ನೀಡುತ್ತಿರುವ ಮೊಟ್ಟೆ ಮತ್ತು ಬಾಳೆಹಣ್ಣಿನ ಅನುದಾನದಲ್ಲಿ ಕೊರತೆಯಾಗುತ್ತಿದ್ದು ಅದು ಶಿಕ್ಷಕರಿಗೆ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ಹೂರೆಯಾಗಿ ಪರಿಣಮಿಸಿದ್ದು ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವ ಉದ್ದೇಶದಿಂದ ಮಾಡಲಾದ ಈ ಯೋಜನೆಗೆ ಹೆಚ್ಚಿನ ಅನುದಾನವನ್ನು ನೀಡುವಂತೆ ಸದನದಲ್ಲಿ ಸರ್ಕಾರವನ್ನು ಶಾಸಕ ಹರೀಶ್ ಪೂಂಜಾ ಒತ್ತಾಯಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version