
ಬೆಳ್ತಂಗಡಿ; ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ರಾಜ್ಯ ಸರಕಾರ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.
ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಸನ್ಮಾನ್ಯ ಡಾ.ಎಂ.ಸಿ. ಸುಧಾಕರ್ ಅವರಿಗೆ ಶಾಸಕರಾದ ಹರೀಶ್ ಪೂಂಜಾ ಅವರು ಧನ್ಯವಾದ ಸಲ್ಲಿಸಿರುತ್ತಾರೆ.







