
ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ 14/2025 ರ 353(2) ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ, ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಪದೆ ಪದೆ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಹಿನ್ನಲೆಯಲ್ಲಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ದ ಡಿ.24 ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ಆದೇಶ ಹೊರಡಿಸಿದ್ದು ಈ ಪ್ರಕರಣದ ಹಿನ್ನಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಬೆಳ್ತಂಗಡಿ ಪೊಲೀಸರಿಗೆ ಸಿಗದಂತೆ ತಲೆ ಮರೆಸಿಕೊಂಡಿದ್ದಾರೆ.









