
ಬೆಳ್ತಂಗಡಿ; ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಸಮೀಪ ಸೇತುವೆ ನಿರ್ಮಾಣಕ್ಕೆ ರೂ 2.75 ಕೋಟಿ ಅನುದಾನ ಮಂಜೂರಾಗಿರುವ ಬಗ್ಗೆ ದಾಖಲೆಗಳನ್ನು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬಿಡುಗಡೆ ಮಾಡಿದ್ದಾರೆ.
ಶಿಶಿಲದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಅವರು ಸೇತುವೆಗೆ ಯಾವುದೇ ಅನುದಾನ ಮಂಜೂರಾಗಿರುವ ಬಗ್ಗೆ ಮಾಹಿತಿಯಿಲ್ಲ ಇಂದಿನ ವರೆಗೆ ಯಾವುದೇ ಆದೇಶವಾಗಿಲ್ಲ ಎಂಬ ಹೇಳಿಕೆ ನೀಡಿದ ಬೆನ್ನಲ್ಲಿಯೇ ರಕ್ಷಿತ್ ಶಿವರಾಂ ಅವರು ಈ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.
ಡಿ.29 ರಂದು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಸೇತುವೆಗೆ ಅನುದಾನ ಮಂಜೂರು ಮಾಡಿರುವ ಆದೇಶ ಪತ್ರ ಇದೀಗ ಬಹಿರಂಗವಾಗಿದೆ
ಮುಖ್ಯಮಂತ್ರಿ ಯವರ ಟಿಪ್ಪಣಿಯಲ್ಲಿ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ರೂ 2.75 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯ 2025-26 ನೇ ಸಾಲಿನ ಅಪೆಂಡಿಕ್ಸ್- ಇ ಅಡಿಯಲ್ಲಿ ಸೇರ್ಲಡೆಗೊಳಿಸಲು ಆದೇಶಿಸಿದ್ದಾರೆ.
ಲೆ.ಶೀ 5054 ಪ್ರಮುಖ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ ಅಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನ ಬಳಿ ಸೇತುವೆ ನಿರ್ಮಾಣಕ್ಕೆ ರೂ 2.75 ಕೋಟಿ ಅನುದಾನ ಮಂಜೂರು ಗೊಳಿಸಿದ್ದಾರೆ.
ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ಪಷ್ಟಪಡಿಸಿದ್ದಾರೆ ಈ ಬಗೆಗಿನ ಸರಕಾರಿ ಆದೇಶವನ್ನು ಅವರು ಬಿಡುಗಡೆ ಮಾಡಿದ್ದಾರೆ. ತಾಲೂಕಿಗೆ ಅನುದಾನ ಮಂಜೂರಾಗುವುದು ಶಾಸಕರಿಗೆ ತಿಳಿದಿಲ್ಲ ಅಂದರೆ ಅವರು ತಾಲೂಕಿನ ಅಭಿವೃದ್ಧಿ ಬಗ್ಗೆ ಎಷ್ಟು ಗಮನ ಹರಿಸುತ್ತಾರೆ ಎಂಬುದನ್ನು ತಿಳಿಯಬಹುದು ಎಂದು ಅವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.










