Home ಅಪಘಾತ ನೆರಿಯ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ನೆರಿಯ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

68
0

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ 31 ರಂದು ಜರಗಿದೆ.
ನೆರಿಯ ಗ್ರಾಮದ ಗಂಡಿ ಬಾಗಿಲು ನಿವಾಸಿ ಜಾನ್ ಪಿ.ಜೆ.(52)ಮೃತಪಟ್ಟವರು.
ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾ ಅವಸ್ಥೆಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ,ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಕೃಷಿಕರಾಗಿದ್ದ ಅವರಿಗೆ ಪತ್ನಿ,ಪುತ್ರ ಹಾಗೂ ಪುತ್ರಿ ಇದ್ದಾರೆ

LEAVE A REPLY

Please enter your comment!
Please enter your name here