Home ಅಪರಾಧ ಲೋಕ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳವಿಗೆ ಯತ್ನ ಅರ್ಚಕ ಹಾಗೂ ಪತ್ನಿಯ ಬಂಧನ

ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳವಿಗೆ ಯತ್ನ ಅರ್ಚಕ ಹಾಗೂ ಪತ್ನಿಯ ಬಂಧನ

36
0

ಪುತ್ತೂರು; ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳು ಕಾರ್ತಿಕ್ ರಾವ್(31) ಹಾಗೂ ಅವರ ಪತ್ನಿ ಸ್ವಾತಿ ರಾವ್ ಎಂಬವ ರಾಗಿದ್ದಾರೆ
ಪುತ್ತೂರು ಕಸಬಾ ನಿವಾಸಿ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ(84) ಅವರು ನೀಡಿದ ದೂರಿನಂತೆ ಡಿ.17ರ ಮಧ್ಯರಾತ್ರಿ ಯಾರೋ ಇಬ್ಬರು ಅಪರಿಚಿತರು ಹೆಲೈಟ್ ಧರಿಸಿಕೊಂಡು ಮುಖಚಹರೆಯನ್ನು ಮರೆಮಾಚಿ, ಮನೆ ಹಿಂಬಾಗಿಲಿನಿಂದ ಪ್ರವೇಶಿಸಿ ಬೆಲೆಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳು ಎ.ವಿ.ನಾರಾಯಣ ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ನಡೆದ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯಗಳಾಗಿದೆ. ಇವರು ಹೆದರಿ ಜೋರಾಗಿ ಕಿರುಚಿದಾಗ ಆರೋಪಿಗಳು ಮನೆಯ ಹಿಂಬಾಗಿಲ ಮೂಲಕ ಓಡಿ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರಿನ ನಗರ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿತ್ತು. ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿಗಳಾದ‌ಕಾರ್ತಿಕ್ ರಾವ್ ಹಾಗೂ ಆತನ ಪತ್ನಿ ಸ್ವಾತಿ ರಾವ್ ಎಂಬವರನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ‌. ಬಂಧಿತ ಆರೋಪಿ ಕರ್ತಿಕ್ ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here