Home ಶಾಲಾ ಕಾಲೇಜು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ

27
0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲಾಕೊಠಡಿ, ಆಟದಮೈದಾನ, ಕುಡಿಯುವನೀರು, ಶೌಚಾಲಯ, ರಂಗಮಂದಿರ, ಬೋಧನಾಸಾಮಾಗ್ರಿಗಳ ವಿತರಣೆ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರೋತ್ಸಾಹ ನೀಡಲಾಗುತ್ತದೆ  ಇದಕ್ಕಾಗಿ ಈ ವರೆಗೆ 47.69 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಗುರುವಾರ ಧರ್ಮಸ್ಥಳದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ 418 ಶಾಲೆಗಳಿಗೆ 3,472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆಗೆ ಚಾಲನೆ ನೀಡಿ ಶುಭ ಹಾರೈಸಿದರು.


ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳಿಗೆ 1074 ಗೌರವ ಶಿಕ್ಷಕರನ್ನು ನೇಮಿಸಲಾಗಿದೆ.
ರಾಜ್ಯದ 11,621 ಶಾಲೆಗಳಿಗೆ 75,518 ಜೊತೆ ಡೆಸ್ಕ್-ಬೆಂಚ್‌ಗಳನ್ನು ಈ ವರೆಗೆ ವಿತರಿಸಿದ್ದು ಇದಕ್ಕಾಗಿ 28.55 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದು ಅವರು ತಿಳಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಶ್ರದ್ಧಾಅಮಿತ್, ಅಮಿತ್, ಕುಮಾರಿ ಮಾನ್ಯ ಉಪಸ್ಥಿತರಿದ್ದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಸವಿವರ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here