Home ಅಪರಾಧ ಲೋಕ ಗಾಂಜಾ ಮಾರಾಟ ಆರೋಪಿಯ ಬಂಧನ

ಗಾಂಜಾ ಮಾರಾಟ ಆರೋಪಿಯ ಬಂಧನ

25
0

ಪುತ್ತೂರು; ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ ಎಂಬಲ್ಲಿ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿರುವುದಾಗಿ‌ ಮಾಹಿತಿ‌ ಬಂದ ಮೇರೆಗೆ, ಪುತ್ತೂರು ನಗರ ಠಾಣಾ ಪಿ.ಎಸ್‌.ಐ ಜನಾರ್ಧನ ಕೆ.ಎಂ ರವರು ಸಿಬ್ವಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ, ಆತನನ್ನು ತಡೆದು ವಿಚಾರಿಸಿದಾಗ, ಆತನು ಪುತ್ತೂರು ಕಸಬಾ ಗ್ರಾಮ ನಿವಾಸಿ ಮಹಮ್ಮದ್‌ ತೌಸೀಫ್‌ (36)ಎಂಬುದಾಗಿ ತಿಳಿಸಿದ್ದು, ತನ್ನ ಬಳಿ ನಿಷೇಧಿತ ಗಾಂಜಾ ಇರುವುದಾಗಿ ಒಪ್ಪಿಕೊಂಡಿರುತ್ತಾನೆ. ತಪಾಸಣೆ ನಡೆಸಿದಾಗ 400 ಗ್ರಾಂ ಗಾಂಜಾ ಪತ್ತೆಯಾಗಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ವಶಕ್ಕೆ ಪಡೆದು ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 02/2026, ಕಲಂ:8(ಸಿ), 20(ಬಿ) ಎನ್‌ಡಿಪಿಎಸ್ ಆಕ್ಟ್ 1985 ರಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

LEAVE A REPLY

Please enter your comment!
Please enter your name here