
ಬೆಳ್ತಂಗಡಿ; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಶನಿವಾರ ಹಾಜರಾಗಲಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಲು ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸದ್ದು ಆವರದಿಯಲ್ಲಿ ಸೌಜನ್ಯ ಪರಹೋರಾಟಗಾರರಾದ ಮಹೇಶ್ ಶೆಟ್ಟಿ ತರೋಡಿ ಹಾಗೂ ಇತರರನ್ನು ಆರೋಪಿಗಳಾಗಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದು ಇದರ ಬಗ್ಗೆ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಜಯಂತ್ ಟಿ ಮಹೇಶ್ ಶೆಟ್ಟಿ ಹಾಗೂ ಇತರ ಹೋರಾಗಾರರ ಪರವಾಗಿ ವಾದ ಮಂಡಿಸಲು ಇದೀಗ ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ.
ಈ ಹಿಂದೆ ಎಸ್.ಐ.ಟಿ ಸಲ್ಲಿಸಿದ್ದ ವರದಿಯ ಪ್ರತಿಯನ್ನು ಪಡೆಯಲು ಜಯಂತ್ ಟಿ ಅವರ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದ ದೊರೆ ರಾಜು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ ಎಸ್.ಐ.ಟಿ ವರದಿಯ ಪ್ರತಿಯನ್ನು ಪಡೆದಿದ್ದರು. ಇದೀಗ ಇದರ ಆಧಾರದ ಮೇಲೆ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸುವ ಸಾಧ್ಯತೆಯಿದೆ