
ಬೆಳ್ತಂಗಡಿ. ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ರವರನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಂದರ್ಭದಲ್ಲಿ,ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ವಿನಯ್ ಹೆಗ್ಡೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಗದೀಶ ಹೆಗಡೆ, ಲಕ್ಷ್ಮಣ್ ಬಂಗೇರ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ಈದು, ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಬಿ ಅಮೀನ್ ಉಪಸ್ಥಿತರಿದ್ದರು.