
ಬೆಳ್ತಂಗಡಿ; ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಪಲ್ಲವಿ ಜಿ ರವರು ಜನವರಿ 5 ರಿಂದ 8 ರವರೆಗೆ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದು , ಬೆಳ್ತಂಗಡಿ ತಾಲೂಕಿಗೆ ಜನವರಿ 6 ರಂದು ಆಗಮಿಸಲಿದ್ದಾರೆ.
ಜನವರಿ 5 ರಂದು ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಲಿರುವ ಅವರು ಜನವರಿ 6 ರಂದು ಬೆಳಗ್ಗೆ 10 ಘಂಟೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಮಲೆಕುಡಿಯ ಸಮುದಾಯದ ಕಾಲನಿಗೆ ಭೇಟಿ ನೀಡಿ ಅಲ್ಲಿ ಜನರ ಕುಂದುಕೊರತೆಗಳನ್ನು ಆಲಿಸುತ್ತಾರೆ. 11 ಘಂಟೆಗೆ ಬೆಳ್ತಂಗಡಿ ನಗರದ ಮಂಜುನಾಥ ಕಲಾ ಭವನದ ಪಿನಾಕಿ ಸಭಾಂಗಣದಲ್ಲಿ ಪ.ಜಾತಿ/ಪಂಗಡಗಳ ಅಲೆಮಾರಿ ಬೈರ , ನಲಿಕೆ , ಪಂಬದ , ಮಲೆಕುಡಿಯ ಸಮುದಾಯಗಳ ಜನಸ್ಪಂದನ ಮತ್ತು ಕುಂದುಕೊರತೆಗಳ ಬಗ್ಗೆ ಸಭೆ ನಡೆಸಲಿದ್ದಾರೆ . ಈ ಕಾರ್ಯಕ್ರಮದಲ್ಲಿ ತಾಲೂಕಿನ ಬೈರ , ನಲಿಕೆ , ಪಂಬದ , ಮಲೆಕುಡಿಯ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








