
ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಸಮಿತಿಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಮಂತ್ ಜೈನ್ ಅವರು ಜ.3 ರಂದು ಸಂಜೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಮೊಕ್ತೇಸರರಾದ ಶರತ್ ಕೃಷ್ಣ ಪಟುವೆಟ್ನಾಯ ಅವರಿಗೆ ಮೂರು ಲಕ್ಷ ರೂಪಾಯಿ ದೇಣಿಗೆಯನ್ನು ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವತಿಯಿಂದ ಸುಮಂತ್ ಜೈನ್ ಅವರಿಗೆ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು.








