
ಬೆಳ್ತಂಗಡಿ : ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಇರುವ ಕಾರ್ತಿಕೇಯ ಎಂಬವರ ಮಾಲೀಕತ್ವದ ‘ಅಭ್ಯಾಸ್ ಪ್ರೀ ಯುನಿವರ್ಸಿಟಿ ಕಾಲೇಜ್’ ನಲ್ಲಿ ಯಾವುದೇ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿಗಳನ್ನು ಪಡೆಯದೆ ಮೊದಲ ಕಟ್ಟಡಗಳ ಕಾಮಗಾರಿಯನ್ನು ನಡೆಸುತ್ತಿದ್ದ ಬಗ್ಗೆ ಸ್ಥಳೀಯ ವ್ಯಕ್ತಿ ದೂರು ನೀಡಿದ್ದರು. ಈ ಬಗ್ಗೆ ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಲಾಯಿಲ ಗ್ರಾಮ ಪಂಚಾಯತ್ ಅಧಿಕಾರಿಗಳು ಜ.5 ರಂದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದರು. ಇದರ ಬಳಿಕ ಮತ್ತೆ ಕಾಮಗಾರಿ ಕೆಲಸ ಮುಂದುವರಿಸಿದ್ದರು. ಇದರ ಬೆನ್ನಲ್ಲೇ ಲಾಯಿಲ ಗ್ರಾಮ ಪಂಚಾಯತ್ ಅಧಿಕಾರಿಗಳು ಜ.8 ರಂದು ಕಾಲೇಜಿನಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಕಾಮಗಾರಿಯನ್ನು ಸ್ಥಗಿತಗೊಳಿಸಿ ಟೇಪ್ ಅಳವಡಿಸಿ ಎಚ್ಚರಿಕೆ ಬ್ಯಾನರ್ ಹಾಕಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಇರುವ ಸರ್ವೆ ನಂಬರ್ 205/44,45,46 ರಲ್ಲಿ ಕಾರ್ತಿಕೇಯ ಎಂಬವರ ಮಾಲೀಕತ್ವದ ‘ಅಭ್ಯಾಸ್ ಪ್ರೀ ಯುನಿವರ್ಸಿಟಿ ಕಾಲೇಜ್’ ನಲ್ಲಿ ಸಕ್ಷಮ ಪ್ರಾಧಿಕಾರದಿಂದ ಎಚ್ಚರಿಕೆ ಟೇಪ್ ಅಳವಡಿಸಿ ಕಾಮಗಾರಿ ಸ್ಥಳಕ್ಕೆ ಪ್ರವೇಶ ನಿರ್ಬಂಧಿಸಿ ಸ್ಥಗಿತಗೊಳಿಸಲಾಗಿದೆ.ಇದನ್ನು ಉಲ್ಲಂಘಿಸಿ ಕಾಮಗಾರಿಯನ್ನು ಪುನರ್ ಆರಂಭಿಸಿದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕಾರ ಹಾಗೂ ಅಕ್ರಮ ಕಟ್ಟಡಗಳನ್ನು ನಿರ್ಬಂಧಿಸುವ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಯಂತೆ ಮತ್ತು ಕರ್ನಾಟಕ ಸರಕಾರ ಸುತ್ತೋಲೆ ಸಂಖ್ಯೆ ಆರ್.ಡಿ.ಪಿ.ಆರ್ /27/ಜಿಪಿಎ 2025 ದಿನಾಂಕ 05-01-2025 ರಂತೆ ಕಾನೂನು ಕ್ರಮವನ್ನು ಸಂಬಂಧಪಟ್ಟರವ ಮೇಲೆ ಜರುಗಿಸಲಾಗುವುದು ಎಂದು ಜ.8 ರಂದು ಅಕ್ರಮ ಕಾಮಗಾರಿಯ ಸುತ್ತಲೂ ಟೇಪ್ ಎಳೆದು ಅದಕ್ಕೆ ಬ್ಯಾನರನ್ನು ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್ ಅವರು ಹಾಕಿ ಎಚ್ಚರಿಕೆ ನೀಡಿದ್ದಾರೆ.