Home ಸ್ಥಳೀಯ ಸಮಾಚಾರ ಜನವರಿ 16 ರಿಂದ 25ಕಾಜೂರು ಮಖಾಂ ಉರೂಸ್ ; ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್...

ಜನವರಿ 16 ರಿಂದ 25ಕಾಜೂರು ಮಖಾಂ ಉರೂಸ್ ; ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

0

​ಕಾಜೂರು: ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಸಮನ್ವಯ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಭಾಗವಹಿಸಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆಯ ಬಗ್ಗೆ ಪ್ರಮುಖ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

​ಉರೂಸ್ ಸಂದರ್ಭದಲ್ಲಿ ನಾಡಿನುದ್ದಗಲದಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿರುವುದರಿಂದ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನಿಗದಿಪಡಿಸಿದ ಪಾರ್ಕಿಂಗ್ ಸ್ಥಳಗಳಲ್ಲೇ ವಾಹನಗಳನ್ನು ನಿಲ್ಲಿಸುವುದು, ರಸ್ತೆ ಬದಿಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವುದು, ಆಯ್ದ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು, ಉರೂಸ್ ನಡೆಯುವ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಇಲಾಖೆಯು ನಿರಂತರ ನಿಗಾ ಇರಿಸಲಿದೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಸಂದೇಶಗಳನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವುದು, ದರ್ಗಾ ಸಮಿತಿಯು ನೇಮಿಸುವ ಸ್ವಯಂಸೇವಕರು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಜನದಟ್ಟಣೆಯನ್ನು ನಿಯಂತ್ರಿಸಲು ಸಹಕರಿಸುವುದು,  ಕಾರ್ಯಕ್ರಮದ ವೇಳೆ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಸಿಬ್ಬಂದಿಗೆ ಅಥವಾ ಸಹಾಯವಾಣಿಗೆ ಮಾಹಿತಿ ನೀಡಬೇಕು ಇವೇ ಮೊದಲಾದ ಅಂಶಗಳ ಬಗ್ಗೆ ಸಮಗ್ರವಾದ ಚರ್ಚೆ ನಡೆಯಿತು.

​ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ, ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ ಸುಬ್ಬಾಪುರಮಠ,ಹಾಗೂ ಸಮನಬಂಧಿಸಿದ ಅಧಿಕಾರಿಗಳು, “ಉರೂಸ್ ಎನ್ನುವುದು ಸೌಹಾರ್ದತೆಯ ಪ್ರತೀಕ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಕಾನೂನು ಪಾಲಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಈ ಶಾಂತಿ ಸಭೆಯಲ್ಲಿ ದರ್ಗಾ ಸಮಿತಿಯ ಪದಾಧಿಕಾರಿಗಳು, ಕಾಜೂರು ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪ್ರತಿನಿಧಿಗಳು, ಸರ್ವಧರ್ಮಗಳ ಪ್ರತಿನಿಧಿಗಳು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

NO COMMENTS

LEAVE A REPLY

Please enter your comment!
Please enter your name here

Exit mobile version