
ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಜೊತೆಗಿದ್ದರು.




