
ಬೆಳ್ತಂಗಡಿ : ಕನ್ಯಾಡಿ 1 ಗ್ರಾಮದ ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಎಂಬವವರು ಜ.16 ರಂದು ಬೆಳಿಗ್ಗೆ 8:15 ಗಂಟೆಗೆ ಮನೆಯ ಅಂಗಳದಲ್ಲಿರುವ ವೇಳೆ ಏಕಾಏಕಿ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸಂಭವಿಸಿದೆ.
ಚಿರತೆ ದಾಳಿಯ ವೇಳೆ ತಕ್ಷಣ ಜೀವರಕ್ಷಣೆಗಾಗಿ ಹತ್ತಿರದ ಅಡಿಕೆ ಮರ ಏರಿದ್ದು. ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಜಪ್ಪ ನಾಯ್ಕ ಅವರ ಮಗ ಪ್ರಭಾಕರ ನಾಯ್ಕ ಅವರು ತಂದೆಯ ಮೇಲೆ ಚಿರತೆ ದಾಳಿಯ ವಿಚಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಕೆಲ ಸಮಯ ವಾಗ್ವಾದ ನಡೆಸಿದರು. ಚಿರತೆ ಭಯದಿಂದಾಗಿ ಜನರು ಮನೆಯಿಂದ ಹೊರ ಬರಲು ಭಯ ಪಡುವಂತಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ