Home ರಾಜಕೀಯ ಸಮಾಚಾರ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರಿಸಿದ ರಕ್ಷಿತ್ ಶಿವರಾಂ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರಿಸಿದ ರಕ್ಷಿತ್ ಶಿವರಾಂ

3
0

ಬೆಳ್ತಂಗಡಿ. ಉಜಿರೆಯಲ್ಲಿ ರಸ್ತೆ ದಾಟುತಿದ್ದ ಸಂದರ್ಭದಲ್ಲಿ ಬಸ್ಸು ಡಿಕ್ಕಿ ಹೊಡೆದು ಗುರಿಪಳ್ಳ ನಿವಾಸಿ ಮಂಚ ಮುಗೇರ ಇವರಿಗೆ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಬೆಳ್ತಂಗಡಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರನ್ನು ಭೇಟಿಯಾದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಇವರ ಆರೋಗ್ಯ ವಿಚಾರಿಸಿ, ವಾಟರ್ ಬೆಡ್ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ವೈದ್ಯರಿಂದ ರೋಗಿಯ ಆರೋಗ್ಯದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದುಕೊಂಡರು. ಈ ಸಂಧರ್ಭದಲ್ಲಿ ಪತ್ನಿ ಗಿರಿಜಾ, ಮಗ ಶ್ರೀ ಲೋಕನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ನಾಗೇಶ್ ಎಂ. ಯುವ ವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಕುಟುಂಬ ಸದಸ್ಯರಾದ ಪ್ರವೀಣ, ಹರೀಶ್, ಸರಸ್ವತಿ ಜಗದೀಶ್, ಪ್ರಮುಖರಾದ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಸೌಮ್ಯ ಲಾಯಿಲ, ಗ್ರಾಮೀಣ ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷರಾದ ಯಶೋದರ ಗೌಡ ಕೊಡ್ಡೋಳು, ಕೇಶವ ಎಂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here