
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾವೂರು ಗ್ರಾಮ ಸಮಿತಿಯ ನೂತನ ಕಛೇರಿ ಮತ್ತು ಮಾಹಿತಿ ಕೇಂದ್ರ ಉದ್ಘಾಟನೆ ಸಾದಿಕ್ ನಾವೂರು ಅಧ್ಯಕ್ಷತೆಯಲ್ಲಿ ನಡೆಯಿತು.
ನೂತನ ಪಕ್ಷದ ಕಛೇರಿ ಉದ್ಘಾಟನೆಯನ್ನು ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಅನುಗ್ರಹ ಟ್ರೈನಿಂಗ್ ಕಾಲೇಜು ಪ್ರಾಂಶುಪಾಲರಾದ ಅಬ್ದುಲ್ ಖಾದರ್ ನಾವೂರು, ಕ್ಷೇತ್ರ ಕಾರ್ಯದರ್ಶಿಗಳಾದ ರಶೀದ್ ಬೆಳ್ತಂಗಡಿ, ಕ್ಷೇತ್ರ ಸಮಿತಿ ಸದಸ್ಯರಾದ ಮುಸ್ತಫಾ ಜಿ.ಕೆ ಹಾಗೂ ಮಹಮ್ಮದ್ ಆಲಿ ಉಜಿರೆ ಉಪಸ್ಥಿತರಿದ್ದರು.
ಜೊತೆ ಕಾರ್ಯದರ್ಶಿ ಸಲೀಂ ಮುರ ಸ್ವಾಗತಿಸಿದರೆ, ಕಾರ್ಯದರ್ಶಿ ಶಹೀಮ್ ಧನ್ಯವಾದಗೈದರು. ಸ್ವಾದಿಕ್ ಕಿರ್ನಡ್ಕ ಕಾರ್ಯಕ್ರಮ ನಿರೂಪಿಸಿದರು.










