Home ಅಪರಾಧ ಲೋಕ ಬೆಳ್ತಂಗಡಿ : 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0

ಬೆಳ್ತಂಗಡಿ : ವಂಚನೆ ಪ್ರಕರಣದಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಅಪರಾಧ ಸಂಖ್ಯೆ 60/2009 ರಲ್ಲಿ CC 813/2009 ಮತ್ತು
Crl Misc No .715/2015 ಕಲಂ, 420 ಐಪಿಸಿ ಪ್ರಕರಣದಲ್ಲಿ ಕಳೆದ ಸುಮಾರು 10 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ನಿವಾಸಿ ನರಸಿಂಹ ಗೌಡ ಮಗ S N ಚಂದ್ರೆಗೌಡ(57) ಎಂಬಾತನನ್ನು ವೇಣೂರು ಪೊಲೀಸರು ಜ.20 ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗಿಹಳ್ಳಿ ಎಂಬಲ್ಲಿ ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ರವಿ ಬಿ ಎಸ್ ರವರ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಉಪ ನೀರಿಕ್ಷಕರು ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದಲ್ಲಿ ವೇಣೂರು ಪೊಲೀಸ್ ಠಾಣಾ ಸಿಬ್ಬಂದಿ ಬೆಣ್ಣಿಚನ್, ಬಸವರಾಜ್, ಮೋಹನ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version