

ಬೆಳ್ತಂಗಡಿ. ವಿಧಾನಮಂಡಲವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣವನ್ನು ‘ರಾಜ್ಯ ಸಚಿವ ಸಂಪುಟ’ ಒದಗಿಸುತ್ತದೆ. ಆ ಭಾ಼ಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ದದ ವಿಷಯಗಳಿವೆ ಎಂಬ ಕಾರಣಕ್ಕಾಗಿ ರಾಜ್ಯಪಾಲರು ಭಾಷಣವನ್ನು ನಿರಾಕರಿಸುವಂತಿಲ್ಲ. ರಾಜ್ಯಪಾಲರು ಯಾವುದೇ ಪಕ್ಷದ ಸದಸ್ಯರಲ್ಲ
ಇಂದು ಕರೆದಿದ್ದ ವಿಶೇಷ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಬೇಕಿದ್ದ ರಾಜ್ಯಪಾಲರು ಸಂವಿಧಾನದ ಆಶಯಕ್ಕೆ ಧಕ್ಕೆ ತಂದಿದ್ದಾರೆ. ಕ್ಯಾಬಿನೆಟ್ ನಲ್ಲಿ ಅನುಮೋದನೆ ಪಡೆದು ಸರ್ಕಾರ ತಯಾರು ಮಾಡಿರುವಂತ ಭಾಷಣವನ್ನು ಗಾಳಿಗೆ ತೂರಿ ತಮ್ಮದೇ ಭಾಷಣವನ್ನ ಓದುವ ಮುಖಾಂತರ ಸಂವಿಧಾನದ ವಿಧಿ 176(1) & 163 ರಿಗೆ ದಕ್ಕೆ ತರುವಂತ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕದ ಶ್ರೀಮಂತ ಸಂಸದೀಯ ಪರಂಪರೆಗೆ ಚ್ಯುತಿ ಬರುವ ರೀತಿಯಲ್ಲಿ ವರ್ತಿಸಿದ್ದಾರೆ. ಅವರ ಈ ಸಂವಿಧಾನ ವಿರೋಧಿ ನಡವಳಿಕೆಯನ್ನು ರಾಜ್ಯದ ಎಲ್ಲಾ ಜನರು ಖಂಡಿಸಬೇಕು ಮತ್ತು ಕರ್ನಾಟಕದಂತ ಪ್ರಗತಿ ಹೊಂದಿದ ರಾಜ್ಯದಲ್ಲಿ ಈ ರೀತಿಯ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿರುವ ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಳ್ಳಬೇಕು.ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.








